ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹50 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯರಿಕೊಪ್ಪ ಬಳಿ ಜಮೀನಿನ ಖರಾಬು ತೆಗೆದು ದಾಖಲೆ ಸರಿಪಡಿಸುವ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಕೆಸಿಡಿ ಬಳಿ ರಾತ್ರಿ 9.30ರ ಸುಮಾರಿಗೆ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತಹಶೀಲ್ದಾರ್ ಅವರನ್ನು ಬಂಧಿಸಿದ್ದಾರೆ. ದೂರುದಾರರು ಬೆಳಗ್ಗೆಯೇ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ. ಇದು ರಾಜ್ಯದಲ್ಲಿ ನಡೆದ ದೊಡ್ಡ ಲಂಚದ ದಾಳಿಗಳಲ್ಲಿ ಒಂದಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

