Breaking News

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ, ಪೊಲೀಸ್-ಜಡ್ಜ್ ಕಾರು ಸೇರಿ ನೂರಾರು ವಾಹನಗಳಿಗೆ ಡಿಕ್ಕಿ!

ಬೆಂಗಳೂರು ಅಗ್ರಹಾರ ದಾಸರಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ 21 ವರ್ಷದ ಪೂಜಾ ಎಂಬ ಯುವತಿಯನ್ನು ಕುಟುಂಬದವರು ಸುಪಾರಿ ನೀಡಿ ಅಪಹರಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಮನೆಗೆ ನುಗ್ಗಿದ ಆರೋಪಿಗಳು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಮುಂದಾಗಿದ್ದಾರೆ. ಸ್ಥಳೀಯರು ತಡೆಯಲು ಬಂದಾಗ ಆರೋಪಿಗಳು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ 35ಕ್ಕೂ ಹೆಚ್ಚು ವಾಹನಗಳು ಹಾಗೂ 100ಕ್ಕೂ ಹೆಚ್ಚು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಹಳ್ಳಿ ಬಳಿ ಸ್ಥಳೀಯರು ಕಾರನ್ನು ಅಡ್ಡಗಟ್ಟಿ ಪೂಜಾಳನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಜಸ್ಥಾನ ಮೂಲದ ರಾಕೇಶ್, ಕರಣ್ ಹಾಗೂ ಆಯನ್ ವಶದಲ್ಲಿದ್ದು, ಕಾರು ಚಾಲಕ ಸದ್ದಾಂ ಸೇರಿದಂತೆ ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *