Breaking News

ಮಹಿಳೆ ಮೇಲೆ ಹಲ್ಲೆ ನಡೆಸಿ ಮನೆಗೆ ಬೆಂಕಿ: ಎಫ್‌ಐಆರ್ ದಾಖಲಿಸಿದ ಪಿಎಸ್‌ಐ ಕಾರಿಗೂ ಬೆಂಕಿ ಇಟ್ಟ ಕಾನ್‌ಸ್ಟೇಬಲ್!

ಕಲಬುರಗಿ ಜಿಲ್ಲೆಯ ಮಹಾಗಾಂವ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ರಾಜಶೇಖರ್ ವರನಾಳ್ ಎಂಬುವವರು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಆಕೆಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪಿಎಸ್‌ಐ ಬಸವರಾಜ್ ಎಫ್‌ಐಆರ್ ದಾಖಲಿಸಿದ್ದರು. ಇದರಿಂದ ಸಿಟ್ಟಿಗೆದ್ದ ರಾಜಶೇಖರ್, ಪಿಎಸ್‌ಐ ಬಸವರಾಜ್ ಅವರ ಖಾಸಗಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ್ದು, ದೊಡ್ಡ ಅನಾಹುತ ತಪ್ಪಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್‌ಸ್ಟೇಬಲ್ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಘಟನೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ಕಾನ್‌ಸ್ಟೇಬಲ್ ಆಗಿರಲಿ ಅಥವಾ ಐಪಿಎಸ್ ಅಧಿಕಾರಿಯಾಗಿರಲಿ, ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣದ ಕುರಿತು ವರದಿ ಕೇಳಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *