ಬೆಂಗಳೂರು ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಕೆಲ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಕಿರುಚಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಕಾರನ್ನು ಹಿಂಬಾಲಿಸಿ ತಡೆಯಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಹಾಗೂ ಯುವತಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಯುವತಿಯನ್ನು ಅಪಹರಿಸಲಾಗಿತ್ತೇ ಅಥವಾ ಬೇರೆ ಕಾರಣಕ್ಕಾಗಿ ಕರೆದೊಯ್ಯಲಾಗಿತ್ತೇ ಎಂಬ ಬಗ್ಗೆ ವಿಜಯನಗರ ಎಸಿಪಿ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

