Breaking News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪ್ರೀತಿಸಿ ಮದ್ವೆಯಾದ ಪತ್ನಿಯನ್ನ ಲಾಡ್ಜ್ ನಲ್ಲಿ ಉಸಿರುಗಟ್ಟಿಸಿ ಕೊಂದು ಪತಿ ಎಸ್ಕೇಪ್!

ದೊಡ್ಡಬಳ್ಳಾಪುರ ನಗರದ ಲಾಡ್ಜ್‌ವೊಂದರಲ್ಲಿ ಪತ್ನಿಯನ್ನು ಕತ್ತು ಬಿಗಿದು ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಕೊಲೆಯಾದ ಮಹಿಳೆ. ಆರೋಪಿ ಪತಿ ಆನಂದ್ ತಲೆಮರೆಸಿಕೊಂಡಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಒಂದು ಗಂಡು ಮಗುವಿದೆ. ಕಳೆದ ಆರು ತಿಂಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಎರಡು ತಿಂಗಳ ಹಿಂದೆ ವಿದ್ಯಾ ಪತಿಯನ್ನು ತೊರೆದು ಬೆಂಗಳೂರಿನ ಪಿಜಿಯಲ್ಲಿ ವಾಸವಾಗಿದ್ದರು. ಸುಮಾರು 20 ದಿನಗಳ ಹಿಂದೆ ಪೊಲೀಸರು ದಂಪತಿಗೆ ಕೌನ್ಸೆಲಿಂಗ್ ನೀಡಿ ಮತ್ತೆ ಒಟ್ಟಿಗೆ ಕಳುಹಿಸಿದ್ದರು. ಬುಧವಾರ ಇಬ್ಬರ ನಡುವೆ ಮತ್ತೆ ಜಗಳವಾಗಿದ್ದು, ಆನಂದ್ ವಿದ್ಯಾಳನ್ನು ಲಾಡ್ಜ್‌ಗೆ ಕರೆತಂದು ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಆಕೆಯ ಮೊಬೈಲ್‌ ತೆಗೆದುಕೊಂಡು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *