ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದೆ. ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ಘಟನೆ ಖಂಡಿಸಿ ಸ್ಥಳೀಯ ಮುಸ್ಲಿಮರು ಭಟ್ಕಳ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು. ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಮಾಹಿತಿಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
