ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. 26 ವರ್ಷದ ಮಧುಮಿತ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕ್ಲೀನಿಕ್‌ನಿಂದ ತಿಂಡಿ ತಿನ್ನಲು ಹೊರಬಂದಾಗ ಬೈಕ್‌ನಲ್ಲಿ ಬಂದ ವೆಂಕಟೇಶ್ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿ, ಆಸಿಡ್ ಎರಚಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮಧುಮಿತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು, ಬಳಿಕ ಸಂಚಾರ ಪೊಲೀಸರು ವೆಂಕಟೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಜೆ.ಪಿ.ನಗರ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ದಾಳಿಗೆ ಕಾರಣವೇನು ಎಂಬುದನ್ನು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
