Breaking News

₹50 ಲಕ್ಷ ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಧಾರವಾಡದಲ್ಲಿ ₹50 ಲಕ್ಷ ಲಂಚದ ಬೇಟೆ..! 1 ಎಕರೆ ಜಮೀನಿಗೂ ಬೇಡಿಕೆ — ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾ ಬಲೆಗೆ..!

“ಮಹಾನುಭಾವ” ತಹಶೀಲ್ದಾರ್‌ಗೆ ಲೋಕಾಯುಕ್ತ ಶಾಕ್..! ₹50 ಲಕ್ಷ ಲಂಚ ಸ್ವೀಕರಿಸುವಾಗ ಕೆಸಿಡಿ ಮೈದಾನದಲ್ಲಿ ಸಿಕ್ಕಿಬಿದ್ದ ಸಚ್ಚಿದಾನಂದ ಕುಚನೂರು..!

ಧಾರವಾಡದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ವಶಕ್ಕೆ ಪಡೆದಿದ್ದಾರೆ…

ಬಾಗಲಕೋಟೆ ಜಿಲ್ಲೆಯ ಮಂಜುನಾಥ ಅರಳಿಕಟ್ಟಿ ಎಂಬುವವರಿಗೆ ಸೇರಿದ, ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿಯ ಜಮೀನಿನಲ್ಲಿನ ‘ಬ’ ಖರಾಬು ಬದಲಾವಣೆ ಮಾಡಿಕೊಡುವುದಕ್ಕಾಗಿ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಷ್ಟೇ ಅಲ್ಲದೆ, ಒಂದು ಎಕರೆ ಜಮೀನನ್ನೂ ಕೇಳಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ…

ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ, ಧಾರವಾಡದ ಕೆಸಿಡಿ ಮೈದಾನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕರಿಸುವ ವೇಳೆ ತಹಶೀಲ್ದಾರ್ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ…

ಲೋಕಾಯುಕ್ತ ಎಸ್ಪಿ ಸಿದ್ಲಿಂಗಪ್ಪ ಕರಣೇಶಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *