ಬೆಂಗಳೂರು: ಹಣಕ್ಕಾಗಿ 13 ವರ್ಷದ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ವಿನಾಯಕನಗರದ ಪ್ರಜ್ವಲ್ (13) ಮೃತ ಬಾಲಕ. ಪ್ರಕರಣಕ್ಕೆ ಸಂಬಂಧಿಸಿ ಆತನ ನೆರೆಮನೆಯ ಭಾಸ್ಕರ್ ರೆಡ್ಡಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಮೆರವಣಿಗೆಗೆ ಪಟಾಕಿ ತರಬೇಕೆಂದು ನಂಬಿಸಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದ ಆರೋಪಿ, ಪೋಷಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಬಾಲಕನಿಗೆ ಬೆದರಿಕೆ ವಿಡಿಯೋ ಮಾಡಿಸಿ ಕಳುಹಿಸಿ, ಹಾಲೋಬ್ರಿಕ್ಸ್ ಕಲ್ಲಿನಿಂದ ಹೊಡೆದು ಕಾರಿನಲ್ಲೇ ಕೊಲೆ ಮಾಡಿದ್ದಾನೆ. ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಆಂಧ್ರಪ್ರದೇಶದತ್ತ ಪರಾರಿಯಾಗುತ್ತಿದ್ದ ವೇಳೆ ಸರಣಿ ಅಪಘಾತಕ್ಕೀಡಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮತ್ತೋರ್ವ ಆರೋಪಿ ಏಳುಕುಂಡಲವಾಡಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

