Breaking News

ಮಂಡ್ಯ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಫ್ಲೈಓರ್‌ನಿಂದ ಹಾರಿ ಅಂಡರ್ ಪಾಸಿಗೆ ಬಿದ್ದ ಕಾರು! ಒಳಗಿದ್ದವರು ಏನಾದ್ರು?

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬಳಿಯ ಉಮ್ಮಡಹಳ್ಳಿ ಗೇಟ್‌ ಸಮೀಪ ಕಾರು ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಅಂಡರ್‌ಪಾಸ್‌ಗೆ ಬಿದ್ದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ಅತಿವೇಗದ ಚಾಲನೆಯಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಆಕೆಯ ಪತಿ ಹಾಗೂ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *