ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಮತ್ತಷ್ಟು ಆರೋಪಗಳು ಬೆಳಕಿಗೆ ಬಂದಿವೆ. ಕೆಪಿಎಸ್‌ಸಿಯಲ್ಲಿ ಅಕ್ರಮವಾಗಿ ಗಳಿಸಿದ ಹಣದಲ್ಲಿ ಗೆಳತಿಗೆ ₹30 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿಕೊಟ್ಟಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿಐಡಿ ತಿಳಿಸಿದೆ. ಈ ಹಿಂದೆ ಇದೇ ಗೆಳತಿಗೆ ₹26 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿದ್ದ ಆರೋಪದ ಮೇಲೆ ಆಭರಣಗಳನ್ನು ಸಿಐಡಿ ಜಪ್ತಿ ಮಾಡಿತ್ತು. ಇದೀಗ ಮತ್ತಷ್ಟು ₹30 ಲಕ್ಷ ಮೌಲ್ಯದ ಆಭರಣಗಳ ಮಾಹಿತಿ ಹೊರಬಂದಿದ್ದು, ಅವುಗಳನ್ನು ತನಿಖಾ ಸಂಸ್ಥೆಗೆ ಹಿಂದಿರುಗಿಸುವಂತೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಇನ್ನು ಹಗರಣದ ಪ್ರಮುಖ ಆರೋಪಿ ಬಸವರಾಜ ಕನ್ನಾಳೆ, ಜ್ಞಾನೇಂದ್ರ ಕುಮಾರ್ ಹಾಗೂ ಅವರ ಕುಟುಂಬದ ವಿದೇಶ ಪ್ರವಾಸಗಳಿಗೆ ಟಿಕೆಟ್ ಮತ್ತು ಇತರೆ ವೆಚ್ಚಗಳನ್ನು ಭರಿಸುತ್ತಿದ್ದ ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಜೊತೆ ಸಂಪರ್ಕ ಹೊಂದಿದ್ದ ಪ್ರಭಾವಿಗಳ ಬಗ್ಗೆಯೂ ಇಡಿ ತನಿಖೆ ನಡೆಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

