ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ವಲಯದ ಎಂ.ಸಿ.ಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಕಡವೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಕಿರಣ್, ಗೋವಿಂದರಾಜು ಹಾಗೂ ಭದ್ರಾವತಿಯ ಮಣಿಕಂಠ ಬಂಧಿತರು. ದಾಳಿ ವೇಳೆ ಸುಮಾರು 70 ಕೆಜಿ ಕಡವೆ ಮಾಂಸ, ತಲೆ ಹಾಗೂ ಕಾಲುಗಳು, ಒಂದು ನಾಡ ಬಂದೂಕು, ದ್ವಿಚಕ್ರ ವಾಹನ, ಕತ್ತಿ, ಚಾಕು, ಚೂರಿ ಹಾಗೂ ಹೆಡ್‌ಲೈಟ್ ಸೇರಿದಂತೆ ಬೇಟೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ. ಬಂಧಿತ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಕವಳ್ಳಿ ವಲಯದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

