Breaking News

ಕರೆ ಸ್ವೀಕರಿಸುತ್ತಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ; ಆರೋಪಿ ಪತಿ ಬಂಧನ

ಬೆಂಗಳೂರು: ಪತ್ನಿ ತನ್ನ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಕಾರಣಕ್ಕೆ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಬಿಳೇಕಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ಗುಂಜಾ ಮದೇಷಿಯಾ (38) ಮೃತ ಮಹಿಳೆ. ಆಕೆಯ ಪತಿ ರಂಜಿತ್ ಕುಮಾರ್ ಗುಪ್ತಾ ಆರೋಪಿಯಾಗಿದ್ದಾನೆ. ಮಕ್ಕಳು ಶಾಲೆಗೆ ತೆರಳಿದ ಬಳಿಕ ದಂಪತಿ ನಡುವೆ ಇದೇ ವಿಚಾರಕ್ಕೆ ಜಗಳ ಆರಂಭವಾಗಿದ್ದು, ಅದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಗುಂಜಾ ಮೃತಪಟ್ಟಿದ್ದು, ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿ ಅಡುಗೆ ಎಣ್ಣೆ ಕಾಯಿಸಿ ಮೃತದೇಹದ ಮೇಲೆ ಸುರಿದು ಶವದ ಗುರುತು ಬದಲಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ನೆರೆಹೊರೆಯವರು ಮಹಿಳೆ ಕಾಣದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ರಂಜಿತ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಮೈಕೋ ಲೇಔಟ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *