Breaking News

ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಡುಪಿ: ಬೆಂಗಳೂರಿನಿಂದ MDMA ತಂದು ಉಡುಪಿ, ಪೆರಂಪಳ್ಳಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರದ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಸೈಯದ್ ಸುಹೇಲ್ (26) ಬಂಧಿತರು. ಸೆ.17ರ ಮಧ್ಯರಾತ್ರಿ ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರು ತಡೆದು ಪರಿಶೀಲಿಸಿದಾಗ ಸುಮಾರು ₹1 ಲಕ್ಷ ಮೌಲ್ಯದ 30 ಗ್ರಾಂ MDMA ಪತ್ತೆಯಾಗಿದೆ. ಜೊತೆಗೆ ನಾಲ್ಕು ಮೊಬೈಲ್‌ಗಳು, ಡಾಂಗಲ್‌, ₹9,500 ನಗದು ಹಾಗೂ ₹3 ಲಕ್ಷ ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *