Breaking News

ಪ್ರೇಯಸಿಯ ಕೊಂದು, ಶವಕ್ಕೆ ನೇಣು ಬಿಗಿದು ಆತ್ಮಹತ್ಯೆ ಕಥೆ ಕಟ್ಟಿದ ಪ್ರಿಯಕರನ ಬಂಧನ

ಬೆಂಗಳೂರು: ಮದುವೆಯಾಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಫ್ಯಾನ್‌ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಸೃಷ್ಟಿಸಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಮುನ್ನದಾಸ್‌ (32) ಬಂಧಿತ ಆರೋಪಿ. ಆ.30ರಂದು ಚಂಪುದಾಸ್‌ (24) ಎಂಬಾಕೆಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಆರಂಭದಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದ ಬಳಿಕ ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ. ಚಂಪುದಾಸ್‌ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರಿಂದ ಕೋಪಗೊಂಡು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಮುನ್ನದಾಸ್‌ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *