ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ ಇನ್‌ಸ್ಟಾಲ್ ಮಾಡಿಕೊಂಡಿದ್ದು, ಬಳಿಕ ಅವರ ಮೊಬೈಲ್ ಹಾಗೂ ಖಾತೆ ಹ್ಯಾಕ್ ಆಗಿದೆ. ಮೊಬೈಲ್ ಹ್ಯಾಕ್ ಮಾಡಿದ ವಂಚಕರು ₹50 ಸಾವಿರಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಹರಿಬಿಡುವುದಾಗಿ ಬೆದರಿಸಿದ್ದಾರೆ. ವಿನೋದ್ ಹಣ ನೀಡಲು ನಿರಾಕರಿಸಿದ ಕೆಲವೇ ನಿಮಿಷಗಳಲ್ಲಿ ಅವರ ಎಡಿಟ್ ಮಾಡಿದ ಅಶ್ಲೀಲ ಫೋಟೋಗಳನ್ನು ಸ್ನೇಹಿತರ ವಾಟ್ಸಾಪ್ ಗ್ರೂಪ್‌ಗಳಿಗೆ ಕಳುಹಿಸಿದ್ದಾರೆ. ಘಟನೆ ಕುರಿತು ವಿನೋದ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುವ ಫೋಟೋ ಎಡಿಟಿಂಗ್ ಆ್ಯಪ್‌ಗಳನ್ನು ಬಳಸುವಾಗ, ಅಪರಿಚಿತ ಹಾಗೂ ನಕಲಿ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
