Breaking News

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ರೈಲ್ವೆ ಪೊಲೀಸರು ಸೇರಿ 6 ಜನರ ವಿರುದ್ಧ ಕೇಸ್​​

ಯಾದಗಿರಿ ರೈಲ್ವೆ ಸ್ಟೇಷನ್ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಕೆಲವರು ಜೀವ ಬೆದರಿಕೆ ಹಾಕಿ ವಿವಿಧ ಲಾಡ್ಜ್‌ಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಹಾಗೂ ಮಹೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಪೊಲೀಸ್‌‍ ಖೆಡ್ಡಾಕ್ಕೆ ಬಿದ್ದ 10 ಲಕ್ಷ ಕೊಟ್ಟರೆ ಒಂದು ಕೋಟಿ ಮಾಡುವುದಾಗಿ ವಂಚಿಸುತ್ತಿದ್ದ ಖತರ್ನಾಕ್‌ ಗ್ಯಾಂಗ್‌

ಬೆಂಗಳೂರು: ₹10 ಲಕ್ಷ ನೀಡಿದರೆ ₹1 ಕೋಟಿ ನೀಡುವುದಾಗಿ ನಂಬಿಸಿ, ಮೂಟೆಗಳಲ್ಲಿ ಹಣ ತೋರಿಸಿ ಹಲವರಿಂದ ₹4.5 ಕೋಟಿಗೂ ಅಧಿಕ …

Leave a Reply

Your email address will not be published. Required fields are marked *