Breaking News

ಕೊಪ್ಪಳ:ಡಿಜೆ ಬಂದ್ ಮಾಡಿಸಿದ್ದಕ್ಕೆ ಕಿಡಿ;ಗಣಪತಿ ಮೆರವಣಿಗೆ ‌ನಿಲ್ಲಿಸಿ ಪ್ರತಿಭಟನೆ

ಕೊಪ್ಪಳ: ಗಣೇಶ ಮೂರ್ತಿಗಳ ಐದನೇ ದಿನದ ವಿಸರ್ಜನಾ ಮೆರವಣಿಗೆ ವೇಳೆ ಜವಾಹರ ರಸ್ತೆಯಲ್ಲಿ ಪೊಲೀಸರು ಡಿಜೆ ಬಂದ್ ಮಾಡಿಸಿದ್ದಕ್ಕೆ ಗಣಪತಿ ಪ್ರತಿಷ್ಠಾಪನಾ ಸಂಘದವರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಗಣಪತಿ ಮೂರ್ತಿಗಳನ್ನು ಮುಂದಕ್ಕೆ ಸಾಗಿಸುವಂತೆ ಪೊಲೀಸರು ಸೂಚಿಸಿದ್ದರಿಂದ ಅಸಮಾಧಾನಗೊಂಡ ಯುವಕರು ಮೂರ್ತಿಗಳೊಂದಿಗೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಈ ವೇಳೆ ಘೋಷಣೆಗಳನ್ನು ಕೂಗಿದರು. ನೂಕುನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಯುವಕರನ್ನು ಚದುರಿಸಲು ಬಲಪ್ರಯೋಗ ಮಾಡಿದರು. ಕೆಲಕಾಲ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಜವಾಹರ ರಸ್ತೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *