ಶಿವಮೊಗ್ಗ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ, ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಂಬಳೇಬೈಲು ವಲಯದ ಯರಗನಾಳು ಗ್ರಾಮದ ಸೇತು ಹಾಗೂ ದರ್ಶನ್ ಬಂಧಿತರಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಕುಸ್ಕೂರು ಗ್ರಾಮದ ಲೋಕೇಶ್ ನಾಯಕ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಭದ್ರಾವತಿ ವಿಭಾಗದ ಉಪ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ತೆಂಗಿನಮನೆ ಮಾರ್ಗದರ್ಶನದಲ್ಲಿ RFO ಪ್ರದೀಪ್ ಎಂ.ಎಸ್. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಅರಣ್ಯ ಸಿಬ್ಬಂದಿ ಹಾಗೂ ವಾಚರ್‌ಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

