Breaking News

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಗೆ ಅಸಭ್ಯ ವರ್ತನೆ; ಆರೋಪಿ ಬಿಟ್ಟು ರಕ್ಷಣೆಗೆ ಬಂದ ಯುವಕರ ಬಂಧಿಸಿದ ಪೊಲೀಸರು!

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳಿಗೆ ರಸ್ತೆಯಲ್ಲೇ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಘಟನೆ ಸೆ.17ರಂದು ನವನಗರದ 51ನೇ ಸೆಕ್ಟರ್‌ನಲ್ಲಿ ನಡೆದಿದೆ. ಸುದೀಪ್ ನಾಡಗೌಡ ಎಂಬಾತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿನಿಯ ನೆರವಿಗೆ ಬಂದ ಚೇತನ್ ಕೊಡಬಾಗಿ ಹಾಗೂ ರೋಹನ್ ಹಾದಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಸುದೀಪ್‌ನನ್ನು ಬಂಧಿಸದೇ, ಚಿಕಿತ್ಸೆಯ ನೆಪದಲ್ಲಿ ಬಿಟ್ಟಿದ್ದಾರೆ ಎಂದು ವಿದ್ಯಾರ್ಥಿನಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ರಕ್ಷಣೆಗೆ ಬಂದವರನ್ನೇ ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಇಬ್ಬರನ್ನು ಕೂಡಲೇ ಬಿಡುಗಡೆ ಮಾಡಿ ಸುದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಕುರಿತು ನವನಗರ ಪೊಲೀಸರ ನಡೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *