ಹುಬ್ಬಳ್ಳಿ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಅಸ್ವಸ್ಥರಾಗಿದ್ದು, ಅವರೊಂದಿಗೆ ಬಂದಿರುವ ವೈದ್ಯರ ವಿಶೇಷ ತಂಡ ಹೋಟೆಲ್‌ನಲ್ಲೇ ಚಿಕಿತ್ಸೆ ನೀಡುತ್ತಿದೆ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭುವನೇಶ ಪಾಟೀಲ್ ಹಾಗೂ ಐಜಿಪಿ ಲಾಬುರಾಮ್ ಹೋಟೆಲ್‌ಗೆ ಭೇಟಿ ನೀಡಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ. ಭದ್ರತಾ ವ್ಯವಸ್ಥೆಯನ್ನೂ ಪರಿಶೀಲಿಸಲಾಗಿದೆ. ವೈದ್ಯರು ಸುಮಾರು ಎರಡು ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಮತ್ತು ವಿಶ್ರಾಂತಿಯ ಬಳಿಕ ಅಮಿತ್ ಶಾ ಅವರು ಮುಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಹುಬ್ಬಳ್ಳಿಯಿಂದ ನೇರವಾಗಿ ನವದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

