Breaking News

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಕೆಎಲ್ ಇ ಆಸ್ಪತ್ರೆ ಉದ್ಘಾಟನೆ ಸಮಾರಂಭಕ್ಕೆ ಗೈರು

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರದ ಉದ್ಘಾಟನಾ ಸಮಾರಂಭಕ್ಕೆ ಗೈರಾಗಿದ್ದಾರೆ. ಶುಕ್ರವಾರ ರಾತ್ರಿ ಡೆನಿಸನ್ಸ್ ಹೋಟೆಲ್‌ನಲ್ಲಿ ತಂಗಿದ್ದ ಅಮಿತ್ ಶಾ, ಶನಿವಾರ ಬೆಳಗ್ಗೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲೇ ಉಳಿದು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಹೋಟೆಲ್‌ಗೆ ತೆರಳಿ ಅಮಿತ್ ಶಾ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಅವರು ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ತೆರಳಿದರು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *