ದಾವಣಗೆರೆಯ ಶೇಖರಪ್ಪ ನಗರ ಬಡಾವಣೆಯಲ್ಲಿ ನಾಗರತ್ನ (45) ಎಂಬ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲವು ವರ್ಷಗಳಿಂದ ನಾಗರಾಜ್ (26) ಜೊತೆ ನಿಕಟ ಸಂಬಂಧ ಹೊಂದಿದ್ದ ನಾಗರತ್ನ ಅವರು ಪತಿಯಿಂದ ದೂರವಾಗಿ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ನಾಗರತ್ನ ಹಾಗೂ ನಾಗರಾಜ್ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಈ ವೇಳೆ ನಾಗರಾಜ್ ಚಾಕುವಿನಿಂದ ನಾಗರತ್ನ ಅವರ ಮೇಲೆ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಬಳಿಕ ಪರಾರಿಯಾಗಲು ಯತ್ನಿಸಿದ ನಾಗರಾಜ್‌ನನ್ನು ಸ್ಥಳೀಯರು ಸುತ್ತುವರಿದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

