ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಹೆಚ್ ಕ್ಯಾಂಪ್-5ರ ಹೊರವಲಯದಲ್ಲಿ 25 ವರ್ಷದ ಸ್ನೇಹಾ ಎಂಬ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹತ್ಯೆಯ ಬಳಿಕ ಒಂದೂವರೆ ವರ್ಷದ ಹೆಣ್ಣುಮಗುವನ್ನು ತಾಯಿಯ ರಕ್ತಸಿಕ್ತ ಶವದ ಮೇಲೆಯೇ ಕುಳ್ಳಿರಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಅಮಿತ್ ಎಂಬಾತನನ್ನು ವಿವಾಹವಾಗಿದ್ದ ಸ್ನೇಹಾ, ಕಳೆದ ನಾಲ್ಕು ತಿಂಗಳಿಂದ ಶೋಭಂ ಎಂಬಾತನೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಅಮಿತ್ ಹಾಗೂ ಶೋಭಂ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

