ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿರುವ ದಾರುಣ ಘಟನೆ ನಡೆದಿದೆ. ಫೋನ್ ಕರೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಜಗಳದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆರ್ನೆ ನಿವಾಸಿ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ. ಜಗಳದ ಬಳಿಕ ಕೋಪಗೊಂಡ ನೂರುನ್ನಿಸಾ, ತನ್ನ ಮಗುವಿನ ಜೊತೆಗೆ ಪತಿಯ ತಂಗಿಯ 3 ವರ್ಷದ ಮಗುವನ್ನೂ ಕರೆದುಕೊಂಡು ಹೋಗಿ ಮನೆಯ ಬಳಿಯ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಸ್ಥಳೀಯರು ತಕ್ಷಣ ಇಬ್ಬರು ಮಕ್ಕಳನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ 3 ವರ್ಷದ ಮಗು ಮೃತಪಟ್ಟಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನೂರುನ್ನಿಸಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

