Breaking News

ಹುಬ್ಬಳ್ಳಿ: ₹700 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆಎಲ್‌ಇ ಆಸ್ಪತ್ರೆ ಉದ್ಘಾಟನೆ

ಹುಬ್ಬಳ್ಳಿ: ಗಬ್ಬೂರು ಕ್ರಾಸ್ ಬಳಿ ನಿರ್ಮಾಣವಾಗಿರುವ ಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಕಾಲೇಜು, ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಉದ್ಘಾಟಿಸಿದರು. ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 751ಕ್ಕೆ ಏರಿಕೆಯಾಗಿದೆ ಎಂದು ಜೋಶಿ ಹೇಳಿದರು. 50 ಎಕರೆ ಪ್ರದೇಶದಲ್ಲಿರುವ ಆಸ್ಪತ್ರೆ 1,200 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಬಡವರಿಗೆ ಉಚಿತ ಚಿಕಿತ್ಸೆ ನೀಡಲು 300 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ನೀಡುವುದು ಸಂಸ್ಥೆಯ ಉದ್ದೇಶ ಎಂದು ಪ್ರಭಾಕರ ಕೋರೆ ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಕಾರಣ ಬೆಳಗಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸಂಜೆ ಆಸ್ಪತ್ರೆಗೆ ತೆರಳಿ ಉದ್ಘಾಟನೆ ನೆರವೇರಿಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *