Breaking News

ಅಪ್ರಾಪ್ತೆ ಜೊತೆಗೆ ಅಸಭ್ಯ ವರ್ತನೆ : ಹುಬ್ಬಳ್ಳಿಯಲ್ಲಿ ಕಾಮುಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆಯರು.!

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಜೀದ್ ನದಾಫ್ ಎಂಬಾತನಿಗೆ ಸ್ಥಳೀಯ ಮಹಿಳೆಯರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಮಕ್ಕಳಿಗೆ ಹಣ ನೀಡಿ ಗುಟ್ಕಾ ತರಿಸಿಕೊಳ್ಳುತ್ತಿದ್ದ ಹಾಗೂ ಮನೆಗೆ ಕರೆಸಿಕೊಂಡು ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಲು ಯತ್ನಿಸಿದಾಗ ಮಹಿಳೆಯರು ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಳೇ ಹುಬ್ಬಳ್ಳಿ ಪೊಲೀಸರು ಮಜೀದ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ …

Leave a Reply

Your email address will not be published. Required fields are marked *