ಬೆಂಗಳೂರು: ಅನ್ನಪೂರ್ಣೇಶ್ವರಿ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರನ್ನು ತಪ್ಪಿಸಲು ಹೋಗಿ ಟಿಟಿ ವಾಹನ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿದ್ದು, ಓರ್ವ ಯುವಕ ಮೃತಪಟ್ಟಿದ್ದಾನೆ. ಐವರು ಗಾಯಗೊಂಡಿದ್ದಾರೆ. ಲಗ್ಗೆರೆ ಸಮೀಪದ ಯುವಕರು ಟಿಟಿ ವಾಹನದಲ್ಲಿ ತೆರಳುತ್ತಿದ್ದಾಗ, ಮಹದೇಶ್ವರ ದೇವಾಲಯದ ಬಳಿ ಕೆಲವರು ವ್ಹೀಲಿಂಗ್ ಮಾಡುತ್ತಾ ಏಕಾಏಕಿ ಅಡ್ಡ ಬಂದಿದ್ದಾರೆ. ಅವರನ್ನು ತಪ್ಪಿಸಲು ಚಾಲಕ ರವಿ ಯತ್ನಿಸಿದಾಗ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬುಲೆನ್ಸ್ ವಿಳಂಬವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

