Breaking News

ರಾಯಚೂರಿನಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಭೀಕರ ಹತ್ಯೆ; ರಕ್ತಸಿಕ್ತವಾಗಿದ್ದ ತಾಯಿಯ ಬಳಿ ಕುಳಿತು 2 ವರ್ಷದ ಮಗು ರೋದನೆ

ರಾಯಚೂರು: ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ 5ರ ಹೊರವಲಯದ ಜಮೀನಿನಲ್ಲಿ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆರ್‌ಎಚ್ ಕ್ಯಾಂಪ್ 4ರ ನಿವಾಸಿ ಸ್ನೇಹಾ (25) ಮೃತ ಮಹಿಳೆ. ಮಾರಣಾಂತಿಕ ಹಲ್ಲೆ ಬಳಿಕ ಸ್ನೇಹಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಗ 2 ವರ್ಷದ ಮಗುವನ್ನು ಪಕ್ಕದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮಗುವಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿ ಅಮಿತ್ ಹಾಗೂ ಪ್ರಿಯಕರ ಶುಭಂನನ್ನು ಸಿಂಧನೂರು ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್‌ಪಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ …

Leave a Reply

Your email address will not be published. Required fields are marked *