Breaking News

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ ಮುನ್ನ ಅಪರಿಚಿತ ವ್ಯಕ್ತಿಯೊಬ್ಬ ಬಕೆಟ್ ಹಿಡಿದು ಶೆಡ್ ಬಳಿ ಓಡಾಡಿದ ಸಿಸಿಟಿವಿ ದೃಶ್ಯಗಳು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಆರಂಭದಲ್ಲಿ ಫ್ರಿಡ್ಜ್ ಅಥವಾ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಸಿಸಿಟಿವಿ ದೃಶ್ಯಗಳ ಹಿನ್ನೆಲೆಯಲ್ಲಿ ಬಕೆಟ್‌ನಲ್ಲಿ ಏನಿತ್ತು ಎಂಬುದು ಸೇರಿದಂತೆ ಹಲವು ಅನುಮಾನಗಳು ಮೂಡಿದ್ದು, ಪೊಲೀಸರು ಸಮಗ್ರ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ ಮೃತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಿಜೆಪಿ ವತಿಯಿಂದ ₹1 ಲಕ್ಷ ಪರಿಹಾರ ನೀಡಲಾಗಿದ್ದು, ಸಿಎಂ ಪರಿಹಾರ ನಿಧಿಯಿಂದಲೂ ಪರಿಹಾರ ಕೊಡಿಸುವುದಾಗಿ ಆರ್. ಅಶೋಕ ತಿಳಿಸಿದ್ದಾರೆ.

Share News

About BigTv News

Check Also

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಶಿಕ್ಷಕ ಎಸ್‌ಪಿ ಕಚೇರಿಯಲ್ಲಿ ಆತ್ಮಹತ್ಯೆ

ರಾಮನಗರ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಶಶಿಧರ್ (49) ಅವರು ಭಾನುವಾರ ಬೆಳಗ್ಗೆ ಜಿಲ್ಲಾ ಎಸ್‌ಪಿ …

Leave a Reply

Your email address will not be published. Required fields are marked *