ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಬಳಿಯ ಹೋಟೆಲ್ ಮುಂದೆ ನಿಂತಿದ್ದ ಆಡಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ 2.30ರ ಸುಮಾರಿಗೆ KA51 MG 9786 ನೋಂದಣಿ ಸಂಖ್ಯೆಯ ಕಾರು ಹೋಟೆಲ್ ಬಳಿ ಬಂದು ನಿಂತಿತ್ತು. ಬೆಳಗ್ಗೆ ಹೋಟೆಲ್ ಸಿಬ್ಬಂದಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಪತ್ತೆಯಾಗಿದೆ. ಮೃತರನ್ನು ಅಕ್ಬರ್ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸೋಕೋ ತಂಡ ಹಾಗೂ ಕೋರಮಂಗಲ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
