Breaking News

ಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ ‘KSRP’ ಕಾನ್ಸ್ಟೇಬಲ್ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ!

ಬೆಂಗಳೂರು: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಹಳ್ಳಿ ಗೇಟ್ ಬಳಿ ಸುಟ್ಟ ಸ್ಥಿತಿಯಲ್ಲಿ ಕೆಎಸ್‌ಆರ್‌ಪಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಕುಮಾರ್ (35) ಎಂದು ಗುರುತಿಸಲಾಗಿದೆ. ನವೀನ್ ಬೈಕ್‌ನಲ್ಲಿ ಡಿ.ಶೆಟ್ಟಹಳ್ಳಿಗೆ ಬಂದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ನಂದಗುಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಶಿಕ್ಷಕ ಎಸ್‌ಪಿ ಕಚೇರಿಯಲ್ಲಿ ಆತ್ಮಹತ್ಯೆ

ರಾಮನಗರ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಶಶಿಧರ್ (49) ಅವರು ಭಾನುವಾರ ಬೆಳಗ್ಗೆ ಜಿಲ್ಲಾ ಎಸ್‌ಪಿ …

Leave a Reply

Your email address will not be published. Required fields are marked *