Breaking News

ಗಣೇಶ ಮೂರ್ತಿ ಮುಂದೆ ದೀಪ ಕಾಯುತ್ತಿದ್ದ 13 ವರ್ಷದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ: ಮುಂದೇನಾಯ್ತು?

ಗಂಗಾವತಿ: ಗಣೇಶ ಮೂರ್ತಿಯ ಮುಂದೆ ಹಚ್ಚಿದ್ದ ದೀಪವನ್ನು ಕಾಯುತ್ತಿದ್ದ 13 ವರ್ಷದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ಗಂಗಾವತಿಯ ಮುಜಾವರ ಕ್ಯಾಂಪಿನಲ್ಲಿ ನಡೆದಿದೆ. ಮಹ್ಮದ್ ರಿಯಾಜ್ ರಫೀಕ್ ಸಾಬ್ (13) ತೀವ್ರವಾಗಿ ಗಾಯಗೊಂಡಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಜಾವರ ಕ್ಯಾಂಪಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ದೀಪ ಕಾಯಲು ರಿಯಾಜ್‌ನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಈ ವೇಳೆ ಸಂತೋಷ (20) ಎಂಬ ಯುವಕ ಬಾಲಕನ ಮೇಲೆ ಪೆಟ್ರೋಲ್ ಸುರಿದು ಊದಿನಕಡ್ಡಿಯಿಂದ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ನಗರ ಪೊಲೀಸರು ಸಂತೋಷನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಮುಜಾವರ ಕ್ಯಾಂಪಿನ ಗಣೇಶ ಮೂರ್ತಿಯನ್ನು ಅದೇ ರಾತ್ರಿ ವಿಸರ್ಜನೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *