ಮಧುಗಿರಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ 17 ವರ್ಷದ ಸಿಂಹಾದ್ರಿ ಎಂಬ ಬಾಲಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದ ಘಟನೆ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತೇಶ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನ ಪ್ರಕಾರ, ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಂಹಾದ್ರಿಗೆ ಆರೋಪಿ ಜಾತಿ ನಿಂದನೆ ಮಾಡಿ ಕಪಾಳಕ್ಕೆ ಹೊಡೆದು, ಬಳಿಕ ಕಲ್ಲಿನಿಂದ ಎದೆಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾನೆ. ಹತ್ಯೆ ಖಂಡಿಸಿ ಹಾಗೂ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ದಲಿತ ಮುಖಂಡರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣವನ್ನು ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳಡಿ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

