Breaking News

ನಿಪ್ಪಾಣಿ | ಅಭಿಷೇಕ ಬಾಮನೆ ಕೊಲೆ ಪ್ರಕರಣ: ಇಬ್ಬರ ಬಂಧನ

ನಿಪ್ಪಾಣಿ: ನಗರದಲ್ಲಿ ನಡೆದ ಅಭಿಷೇಕ ಬಾಮನೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಸಾಯಿನಾಥ ಅಲಿಯಾಸ್ ಶುಭಂ ಬಾಮನೆ ಹಾಗೂ ವಿಠ್ಠಲ ಬಾಮನೆ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನೂ ವಶಕ್ಕೆ ಪಡೆದು ಬಾಲಾಪರಾಧಿಗಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಅಭಿಷೇಕ ಹಾಗೂ ಆರೋಪಿಗಳ ನಡುವೆ ಜಗಳ ನಡೆದ ವೇಳೆ ಸಾಯಿನಾಥ ಚಾಕುವಿನಿಂದ ಅಭಿಷೇಕನ ಹೊಟ್ಟೆಗೆ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡ ಬಸವೇಶ್ವರ ಚೌಕ್ ಪೊಲೀಸರು ಸಿಪಿಐ ಬಿ.ಎಸ್. ತಳವಾರ ನೇತೃತ್ವದಲ್ಲಿ ತನಿಖೆ ನಡೆಸಿ, ಘಟನೆ ನಡೆದ ಮೂರೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *