Breaking News

ಯುವತಿಯ ಅಶ್ಲೀಲ ಚಿತ್ರ ವೈರಲ್ ಮಾಡುವ ಬೆದರಿಕೆ: ಚಿನ್ನಾಭರಣ ಎಗರಿಸಿದ ಯುವಕ

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಯುವತಿಗೆ ಅಶ್ಲೀಲ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದ ಆರೋಪದ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಯುವತಿಯ ಮೊಬೈಲ್ ಸಂಖ್ಯೆ ಪಡೆದು, ಬಳಿಕ ಅಶ್ಲೀಲ ಚಿತ್ರಗಳನ್ನು ಪಡೆದಿದ್ದಾನೆ ಎನ್ನಲಾಗಿದೆ. ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಚಿನ್ನ ನೀಡುವಂತೆ ಒತ್ತಾಯಿಸಿದ್ದಾನೆ. ಬಳಿಕ ತನ್ನ ಸ್ನೇಹಿತನ ಮೂಲಕ ಯುವತಿ ಕಳುಹಿಸಿದ ಸ್ಥಳದಿಂದ ಚಿನ್ನ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಮತ್ತೆ ಚಿನ್ನಕ್ಕೆ ಬೇಡಿಕೆ ಇಟ್ಟಾಗ ಯುವತಿ ವಿಷಯವನ್ನು ಮನೆಯವರಿಗೆ ತಿಳಿಸಿದ್ದು, ಅವರು ಆರೋಪಿಯನ್ನು ಸಂಪರ್ಕಿಸಿದ್ದಾರೆ. ಚಿನ್ನವನ್ನು ಹಿಂದಿರುಗಿಸುವುದಾಗಿ ಹೇಳಿದ್ದರೂ ವಾಪಸ್ ನೀಡದೆ ಮೋಸ ಮಾಡಿದ್ದಾನೆ ಎಂದು ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *