ಬೆಂಗಳೂರು: ಉತ್ತರಹಳ್ಳಿ ಅರಹಳ್ಳಿ ಗೇಟ್ ಬಳಿ ರಾತ್ರಿ ಮಾರಕಾಸ್ತ್ರ ಹಿಡಿದು ಬಂದ ಆರು ಮಂದಿ ದುಷ್ಕರ್ಮಿಗಳು ನಡುರಸ್ತೆಯಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೂರು ಬೈಕ್‌ಗಳಲ್ಲಿ ಮಾಸ್ಕ್ ಧರಿಸಿ ಬಂದ ಆರೋಪಿಗಳು ಲಾಂಗು, ಮಚ್ಚು ಹಿಡಿದು ಅಂಗಡಿ ಮುಂದೆ ನಿಂತಿದ್ದವರ ಮೇಲೆ ದಾಳಿ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮೀನು ಅಂಗಡಿ ಮಾಲೀಕ ಬಾಲಸುಬ್ರಹ್ಮಣ್ಯಂ ಹಾಗೂ ರವಿ ಗಾಯಗೊಂಡಿದ್ದಾರೆ. ರವಿ ಅವರ ಕಿವಿ ಮತ್ತು ಕೈಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಾರಕಾಸ್ತ್ರ ಹಿಡಿದು ದಾಂಧಲೆ ನಡೆಸಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

