Breaking News

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ ಬೆಳೆದಿರುವ ಘಟನೆ ಗುಬ್ಬಿ ತಾಲೂಕಿನ ಗುಡ್ಡದಹಳ್ಳಿ ಹಟ್ಟಿ ಗ್ರಾಮದಲ್ಲಿ ನಡೆದಿದೆ. ಹಿತೇಂದ್ರ (28) ಬಂಧಿತ ಆರೋಪಿ. ಖಚಿತ ಮಾಹಿತಿ ಆಧರಿಸಿ ಚೇಳೂರು ಪೊಲೀಸರು ದಾಳಿ ನಡೆಸಿದಾಗ, ತೋಟದಲ್ಲಿ ಗೊಬ್ಬರ ಹಾಕಿ ಬೆಳೆಸಲಾಗಿದ್ದ 8.2 ಅಡಿ ಎತ್ತರದ ಗಾಂಜಾ ಗಿಡ ಪತ್ತೆಯಾಗಿದೆ. ಸುಮಾರು 950 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ದೇವರ ಪೂಜೆಗೆಂದು ಗಾಂಜಾ ಗಿಡ ಬೆಳೆಸಿದ್ದಾಗಿ ಹಿತೇಂದ್ರ ಹೇಳಿದ್ದಾನೆ ಎನ್ನಲಾಗಿದೆ. ಹೂ ಬಿಡುವ ಮುನ್ನವೇ ಗಿಡವನ್ನು ಪೊಲೀಸರು ಪತ್ತೆ ಮಾಡಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.

Share News

About BigTv News

Check Also

ಪ್ರೀತಿಸಿ ಮದುವೆಯಾದ ಜೋಡಿಗೆ ಪೊಲೀಸರೇ ವಿಲನ್ – ಕಟ್ಟಿದ್ದ ತಾಳಿ ಬಿಚ್ಚಿಸಿ ಕಿರುಕುಳ?

ತುಮಕೂರು: ಪ್ರೀತಿಸಿ ಮದುವೆಯಾದ ನವಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಯುವತಿಯ ಪೋಷಕರೊಂದಿಗೆ ಸೇರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಧುಗಿರಿಯಲ್ಲಿ …

Leave a Reply

Your email address will not be published. Required fields are marked *