Breaking News

ಬೆಂಗಳೂರಿಗೂ ಕಾಲಿಡ್ತು ಕಟ್ಟಾ ದಂಧೆ – ಕಂಟ್ರಿ ಪಿಸ್ತೂಲ್‌ ಮಾರಾಟ ಜಾಲ ಬಯಲು!

ಆನೇಕಲ್‌ನಲ್ಲಿ ನಡೆಯುತ್ತಿದ್ದ ಅಕ್ರಮ ಕಂಟ್ರಿ ಮೇಡ್ ಪಿಸ್ತೂಲ್ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಪ್ರಮುಖ ಆರೋಪಿ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದಿಂದ ರೈಲಿನ ಮೂಲಕ ಪಿಸ್ತೂಲ್‌ಗಳನ್ನು ಆನೇಕಲ್‌ಗೆ ತಂದು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಹಾಲ್ದೇನಹಳ್ಳಿ ರೈಲ್ವೇ ಗೇಟ್ ಬಳಿ ಅನುಮಾನಾಸ್ಪದವಾಗಿ ಸಿಕ್ಕಿಬಿದ್ದ ಪ್ರದೀಪ್ ರಮೇಶ್‌ನ ವಿಚಾರಣೆಯಿಂದ ಜಾಲದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (KOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದು, ಹತ್ತಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.

Share News

About BigTv News

Check Also

ಪಿಎಸ್‌ಐ ಜೊತೆ ಮಾತಿನ ಚಕಮಕಿ ಪ್ರಕರಣ: ಐಶ್ವರ್ಯಗೌಡರಿಂದ ಬೇಷರತ್ ಕ್ಷಮೆಯಾಚನೆ

ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ …

Leave a Reply

Your email address will not be published. Required fields are marked *