Breaking News

ಲಂಚ ಪ್ರಕರಣ: ಬಜ್ಪೆ ಠಾಣೆಯ Police Inspector ಬಾಲಕೃಷ್ಣ ಲೋಕಾಯುಕ್ತ ಬಲೆಗೆ

ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಅವರು ಈಗಾಗಲೇ ₹15 ಸಾವಿರ ಮುಂಗಡ ಪಡೆದಿದ್ದು, ಉಳಿದ ₹10 ಸಾವಿರ ನೀಡುವಂತೆ ಸಂತ್ರಸ್ತರಿಗೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಸೋಮವಾರ ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣ ಸಹಿತ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪಿಎಸ್‌ಐ ಜೊತೆ ಮಾತಿನ ಚಕಮಕಿ ಪ್ರಕರಣ: ಐಶ್ವರ್ಯಗೌಡರಿಂದ ಬೇಷರತ್ ಕ್ಷಮೆಯಾಚನೆ

ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ …

Leave a Reply

Your email address will not be published. Required fields are marked *