ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್..
ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ ಶೇ.100 ಗುರಿ ನಿಗದಿ…
ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಖಡಕ್ ಸೂಚನೆ!ಆಗಸ್ಟ್‌ನಲ್ಲಿ 100% ಪ್ರಕರಣ ದಾಖಲಿಸುವಲ್ಲಿ ವಿಫಲ ಅಧಿಕಾರಿಗಳಿಗೆ ಮೇಲಧಿಕಾರಿಗಳ ಸೂಚನೆ…
ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರವರ್ತನಾ ಚಟುವಟಿಕೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ….

2026ರ ಆಗಸ್ಟ್ ತಿಂಗಳ ವರದಿಯಲ್ಲಿ, ನಿಗದಿಪಡಿಸಲಾಗಿದ್ದ ಶೇ.100ರ ಸಂಚಿತ ಸಾಧನೆಗಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳನ್ನು ದಾಖಲಿಸಿರುವ ಕೆಲವು ಘಟಕಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಘಟಕಾಧಿಕಾರಿಗಳಿಗೆ ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ…
ನಿಯಮ ಉಲ್ಲಂಘನೆ ಕಂಡುಬಂದರೆ ಪ್ರಕರಣ ದಾಖಲಿಸಿ—ಪ್ರವರ್ತನಾ ಚಟುವಟಿಕೆಯಲ್ಲಿ ಶೇ.100ರಷ್ಟು ಸಾಧನೆ ಮಾಡುವಂತೆ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ….

ಇದರ ಜೊತೆಗೆ ಕೇವಲ ಪ್ರಕರಣ ದಾಖಲಿಸುವುದಷ್ಟೇ ಅಲ್ಲದೆ, ವಾಹನ ಸವಾರರಲ್ಲಿ ಸಂಚಾರ ನಿಯಮ, ರಸ್ತೆ ಸುರಕ್ಷತೆ ಹಾಗೂ ಜವಾಬ್ದಾರಿಯುತ ಚಾಲನೆ ಕುರಿತು ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ನಡೆಸುವಂತೆ ಸೂಚಿಸಲಾಗಿದೆ…
ಹುಬ್ಬಳ್ಳಿ–ಧಾರವಾಡ, ಮಂಗಳೂರು ಸೇರಿದಂತೆ ಹಲವು ನಗರ ಹಾಗೂ ಜಿಲ್ಲೆಗಳ ಪೊಲೀಸ್ ಘಟಕಗಳಿಗೆ ಈ ಸೂಚನೆ ಅನ್ವಯವಾಗಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಾಗಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

