Breaking News

ಶಾರ್ಜಾದಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಸಹೋದರನ ಆಗ್ರಹ

ಕುಂದಾಪುರ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 14 ವರ್ಷಗಳಿಂದ ಶಾರ್ಜಾ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಜುಲೈ 20ರಿಂದ ಕುಟುಂಬದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಕಾಶ್ ಅವರ ಸಹೋದರ ಅನಿಲ್ ಪ್ರಶಾಂತ್ ಕುಂದರ್ ಉಡುಪಿ ಎಸ್ಪಿಗೆ ಮನವಿ ಸಲ್ಲಿಸಿದ್ದು, ತನಿಖೆ ವೇಳೆ ಒಮನ್‌ಗೆ ತೆರಳುವ ಮಾರ್ಗದ ಬದಿಯಲ್ಲಿ ಕಾರಿನಲ್ಲಿ ಎರಡು ಬ್ಯಾಗ್‌ಗಳಲ್ಲಿ 9 ತುಂಡುಗಳಾಗಿ ತುಂಬಿಸಿಟ್ಟಿದ್ದ ಮೃತದೇಹ ಪತ್ತೆಯಾಗಿದೆ. ಬಳಿಕ ಅದು ಪ್ರಕಾಶ್ ಅವರದ್ದೇ ಎಂದು ದೃಢಪಟ್ಟಿದೆ. ಪ್ರಕಾಶ್ ಅವರ ಪತ್ನಿ ಹಾಗೂ ಮಗ ಸದ್ಯ ಶಾರ್ಜಾದಲ್ಲಿ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಹತ್ಯೆಯ ಹಿಂದಿರುವ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಹೋದರ ಅನಿಲ್ ಪ್ರಶಾಂತ್ ಒತ್ತಾಯಿಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *