ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಗೌಡ ಕ್ಷಮೆಯಾಚಿಸಿದ್ದಾರೆ. ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಹೆಚ್ಚಿನ ಭಕ್ತರಿದ್ದ ಕಾರಣ ಬೇಗ ದರ್ಶನ ಪಡೆಯಲು ಮುಂದಾಗಿದ್ದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್‌ಐ ಜೊತೆ ಮಾತಿನ ಚಕಮಕಿ ನಡೆದಿದ್ದು, ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಘಟನೆ ನಡೆಯಬಾರದಿತ್ತು, ಇದರಿಂದ ವಿಷಾದವಾಗಿದೆ. ಸವಿತಾ ಪಾಟೀಲ್ ಅವರಿಗೆ ನನ್ನಿಂದ ನೋವಾಗಿದ್ದರೆ, ನಡೆದ ಘಟನೆಯ ಕುರಿತು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದು ಐಶ್ವರ್ಯಗೌಡ ವಿಡಿಯೊ ಹೇಳಿಕೆ ಮೂಲಕ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

