ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್ ಹಾಗೂ ತಳವಾರಹಳ್ಳಿ ಬಳಿ ಪ್ರೀತಿಯ ವಿಚಾರಕ್ಕೆ ಯುವಕನನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಹಾನಗಲ್ ಗ್ರಾಮದ ನಾಗೇಶ್ (22) ಮೃತ ಯುವಕ. ರುದ್ರಮ್ಮನಹಳ್ಳಿ ಮೂಲದ ಯುವತಿಯೊಂದಿಗೆ ನಾಗೇಶ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದನು. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಮಾತುಕತೆಗಾಗಿ ನಾಗೇಶ್‌ನನ್ನು ಕರೆಸಿಕೊಂಡು ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ತಳವಾರಹಳ್ಳಿ ಬಳಿ ನಾಗೇಶ್‌ನ ಮೃತದೇಹ ಬಿಸಾಡಿರುವ ಆರೋಪ ಕೇಳಿಬಂದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದು, ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

