Breaking News

ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್

ಕಾಸರಗೋಡು ಜಿಲ್ಲೆಯ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ ಒನ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ ಆರೋಪದಡಿ 14 ಮಂದಿ ಪ್ಲಸ್‌ ಟು ವಿದ್ಯಾರ್ಥಿಗಳ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶಿಕ್ಷಣ ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ. ಆ್ಯಂಟಿ ರ‍್ಯಾಗಿಂಗ್ ಸ್ಕ್ವಾಡ್ ನೀಡಿದ ವರದಿ ಆಧರಿಸಿ ಶಾಲೆಯ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆಧಾರದ ಮೇಲೆ ಪೊಲೀಸರು 14 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲೆಯ ಐವರು ಪ್ಲಸ್‌ ಒನ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ಗೆ ಒಳಗಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *