Breaking News

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ ಮಾರಕಾಸ್ತ್ರಗಳಿಂದ ಸಾರ್ವಜನಿಕರ ಮೇಲೆ ದಾಳಿ ನಡೆಸಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಣೇಶೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದಿದ್ದ ಗಲಾಟೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಾಲ್ವರು ಆರೋಪಿಗಳ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಲಾಗಿದೆ.

Share News

About BigTv News

Check Also

ಮಾಜಿ ಸೈನಿಕನ ಕೊಲೆ: ಒಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 10 ವರ್ಷ ಜೈಲು

ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ 2023ರ ಜೂನ್ 4ರಂದು ಜಮೀನು ಪಾಲು ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕ …

Leave a Reply

Your email address will not be published. Required fields are marked *