Breaking News

ಅಕ್ರಮ ಜಾನುವಾರು ಸಾಗಾಟ ಜಾಲ ಭೇದಿಸಿದ ಪೊಲೀಸರು, 17 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಕಂಕನಾಡಿ ನಗರ ಪೊಲೀಸರು ತಡೆದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಸೆ.22ರಂದು ಬೆಳಗ್ಗೆ ಆಡ್ಯಾರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಪಡೀಲ್‌ನಲ್ಲಿ ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿಯಲ್ಲಿ ಜಾನುವಾರುಗಳನ್ನು ಯಾವುದೇ ಸುರಕ್ಷತಾ ಕ್ರಮವಿಲ್ಲದೆ ಬಿಗಿಯಾಗಿ ಕಟ್ಟಿ, ಒಂದರ ಮೇಲೊಂದು ಹಾಕಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮೂಲದ 23 ವರ್ಷದ ಲಾರಿ ಚಾಲಕ ಸಾದಿಕ್ ಜಿ. ಅವರನ್ನು ಪೊಲೀಸರು ಬಂಧಿಸಿದ್ದಾರೆ. 17 ಜಾನುವಾರುಗಳು, ಲಾರಿ ಹಾಗೂ ಆರೋಪಿಯ ಮೊಬೈಲ್ ಫೋನ್ ಸೇರಿದಂತೆ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಸುಬಾನ್ ಮತ್ತು ರೆಹಮಾನ್‌ಗಾಗಿ ಶೋಧ ನಡೆಸಲಾಗುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮಾಜಿ ಸೈನಿಕನ ಕೊಲೆ: ಒಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 10 ವರ್ಷ ಜೈಲು

ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ 2023ರ ಜೂನ್ 4ರಂದು ಜಮೀನು ಪಾಲು ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಜಿ ಸೈನಿಕ …

Leave a Reply

Your email address will not be published. Required fields are marked *