ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…?
ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ ಪುಂಡರು!
ಗಂಟೆಗಳು ಕಳೆದರೂ FIR ಇಲ್ಲ—ಇದು ಎಷ್ಟರಮಟ್ಟಿಗೆ ಸರಿ..?
ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೇ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಗಂಟೆಗಳು ಕಳೆದರೂ ಪ್ರಕರಣ ದಾಖಲಾಗಿಲ್ಲ ಎನ್ನಲಾಗುತ್ತಿದೆ. ಇದರಿಂದ ಪೊಲೀಸರ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರಶ್ನೆಗಳು ಕೇಳಿಬರುತ್ತಿವೆ…

ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ವೆಂಕಟೇಶ ಉಪ್ಪಾರ ಅವರು ಕರ್ತವ್ಯ ಮುಗಿಸಿಕೊಂಡು ನೇಕಾರನಗರದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ನೆಹರು ನಗರದ ವಾಟರ್ ಟ್ಯಾಂಕ್ ಸಮೀಪದ ಹೋಟೆಲ್ ಬಳಿ ಗಲಾಟೆ ನಡೆದಿದೆ ಎನ್ನಲಾಗಿದೆ….
ಈ ವೇಳೆ ಹೋಟೆಲ್ ಮಾಲೀಕ ಸಾ….. ಅವರು ಪೊಲೀಸ್ ಸಿಬ್ಬಂದಿ ವೆಂಕಟೇಶ ಉಪ್ಪಾರ…. ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….
ಪೊಲೀಸರ ಮೇಲೆಯೇ ಕೈ ಮಾಡುವಷ್ಟು ಮಟ್ಟಿಗೆ ಪುಂಡರು ಬೆಳೆದಿದ್ದರೆ, ಸಾಮಾನ್ಯ ಜನರ ಪರಿಸ್ಥಿತಿ ಹೇಗಿರಬಹುದು..? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ….
ಘಟನೆ ನಡೆದು ಗಂಟೆಗಳು ಕಳೆದರೂ FIR ದಾಖಲಾಗಿಲ್ಲ ಎನ್ನಲಾಗುತ್ತಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ವಿಳಂಬ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ…
ಇದು ಕೇವಲ ಒಬ್ಬ ಪೊಲೀಸ್ ಸಿಬ್ಬಂದಿಯ ಮೇಲಿನ ಹಲ್ಲೆಯ ಪ್ರಶ್ನೆಯಲ್ಲ. ಕಾನೂನು ಜಾರಿ ಮಾಡುವ ಸಿಬ್ಬಂದಿಯ ಮೇಲೆಯೇ ಕೈ ಎತ್ತುವ ಧೈರ್ಯ ಯಾರಿಗೆ ಬರುತ್ತಿದೆ ಎಂಬುದನ್ನು ಗಂಭೀರವಾಗಿ ಪರಿಶೀಲಿಸಬೇಕಾದ ವಿಚಾರ….
ಸಿಸಿಟಿವಿ ದೃಶ್ಯಗಳು, ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಹಾಗೂ ವೈದ್ಯಕೀಯ ವರದಿ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕಿದೆ…
ಇಲ್ಲವಾದರೆ “ಪೊಲೀಸರ ಮೇಲೆಯೇ ಹಲ್ಲೆ ಮಾಡಿದರೂ ಕ್ರಮ ಕೈಗೊಳ್ಳಲು ಗಂಟೆಗಟ್ಟಲೆ ಕಾಯಬೇಕಾ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುವುದು ಸಹಜ…
ಈ ಘಟನೆಗೆ ಸಂಬಂಧಿಸಿದಂತೆ ಗೋಕುಲ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
