Breaking News

ಜಾತಿ ನಿಂದನೆ ಆರೋಪ – ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು!

ಮೈಸೂರು: ಟಿ. ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, ಜಾತಿ-ಧರ್ಮಗಳ ನಡುವೆ ದ್ವೇಷಕ್ಕೆ ಉತ್ತೇಜನ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಅವರು ಕರ್ತವ್ಯನಿರತ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಗದಿತ ಸಮಯ ಮೀರಿ ಮೆರವಣಿಗೆ ನಡೆಸಿ, ಪ್ರಚೋದನಕಾರಿ ಘೋಷಣೆಗಳನ್ನು ಕೂಗಿರುವ ಆರೋಪವೂ ಇದೆ. ಈ ಸಂಬಂಧ BNSನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಸರ್ಕಾರದ ಒತ್ತಡದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

Share News

About BigTv News

Check Also

ಅಕ್ರಮ ಜಾನುವಾರು ಸಾಗಾಟ ಜಾಲ ಭೇದಿಸಿದ ಪೊಲೀಸರು, 17 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಕಂಕನಾಡಿ ನಗರ ಪೊಲೀಸರು ತಡೆದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. …

Leave a Reply

Your email address will not be published. Required fields are marked *