Breaking News

ಹೈದಾರಾಬಾದ್ ನಿಂದ ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ವಿಲ್ಸನ್ ಗಾರ್ಡನ್ ಪೊಲೀಸರು ಮನೆ ಕಳ್ಳತನ ಮಾಡುತ್ತಿದ್ದ ಹೈದರಾಬಾದ್ ಮೂಲದ ನೇನಾವತ್ ವಿನೋದ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ 10ನೇ ಕ್ರಾಸ್‌ನ ಮನೆಯೊಂದಕ್ಕೆ ನುಗ್ಗಿ ವೃದ್ಧ ದಂಪತಿಯನ್ನು ಬೆದರಿಸಿ ಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿದ್ದ. ವಿಚಾರಣೆ ವೇಳೆ ಕಳ್ಳತನಕ್ಕಾಗಿ ಹೈದರಾಬಾದ್‌ನಿಂದ ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಹೈದರಾಬಾದ್‌ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಪೊಲೀಸರ ಹುಡುಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರನ್ನು ಕಳ್ಳತನಕ್ಕೆ ಆಯ್ಕೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆರೋಪಿಯಿಂದ ₹40 ಲಕ್ಷ ಮೌಲ್ಯದ 271 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಗರಗಸದಿಂದ ರುಂಡ-ಮುಂಡ ಬೇರ್ಪಡಿಸಿ, 2 ಚೀಲದಲ್ಲಿ ತುಂಬಿದ ರಾಕ್ಷಸರು : ಪೋಸ್ಟ್ ಮಾರ್ಟಂನಲ್ಲಿ ಬೆಚ್ಚಿ ಬೀಳಿಸುತ್ತೆ ಪ್ರಕಾಶ್ ಕುಂದರ್ ಹತ್ಯೆ!

ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಎಂಬವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಅವರ …

Leave a Reply

Your email address will not be published. Required fields are marked *